ಬೆಂಗಳೂರು. ಅ. 8: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು
ತಿಳಿಸಿದ್ದಾರೆ.
ಅವರ ನಿಧನದಿಂದ ಹಿರಿಯ ರಾಜಕೀಯ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ಹಾಗೂ ಅನುಯಾಯಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಜಲಸಂಪನ್ಮೂಲ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA