ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ *ಕೇಶುಭಾಯಿ ಪಟೇಲ್* ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಕೇಶುಭಾಯಿ ಪಟೇಲ್, ಆರ್ ಎಸ್ ಎಸ್ ನ ಶಿಸ್ತಿನ ಸ್ವಯಂ ಸೇವಕರಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿಗಳಾಗಿ ಗುಜರಾತ್ ರಾಜ್ಯದ ಅಭಿವೃದ್ಧಿಗೆ ಅಪೂರ್ವ ಕೊಡುಗೆ ನೀಡಿದ್ದರು ಎಂದು ಸಚಿವ ಜಾರಕಿಹೊಳಿ ಸ್ಮರಿಸಿದ್ದಾರೆ.
ಸಮಾಜದ ಎಲ್ಲಾ ವರ್ಗದ ಜನರ ಸರ್ವಾಂಗೀಣ ಏಳಿಗೆಗೆ ಶ್ರಮಿಸಿದ್ದ *ಕೇಶುಭಾಯಿ ಪಟೇಲ್* ಅವರ ನಿಧನದಿಂದಾಗಿ ಒಬ್ಬ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಿಸಿರುವ ಸಚಿವರು, ಪಟೇಲ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಸ್ಥರಿಗೆ, ಬಿಜೆಪಿ ಕಾರ್ಯಕರ್ತರಿಗೆ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಸಚಿವ *ರಮೇಶ್ ಜಾರಕಿಹೊಳಿ* ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.