ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಿರುವುದು ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಜನಬೆಂಬಲ ಇರುವುದನ್ನು ಸೂಚಿಸುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದ್ದಾರೆ.
ಉಪಚುನಾವಣೆಯ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಆತ್ಮವಿಶ್ವಾಸದಂತೆ ಗೆಲುವು ನಮ್ಮದೇ ಎಂದು ಹೇಳಿದ್ದೆವು. ಅದರಂತೆ ಎರಡೂ ಕ್ಷೇತ್ರಗಳಲ್ಲಿ ವಿಜಯಿಯಾಗಿದ್ದೇವೆ. ಇಂದಿನ ಫಲಿತಾಂಶವು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಜನಪರ ಆಡಳಿತಕ್ಕೆ ಸಿಕ್ಕ ಮನ್ನಣೆಯಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಅಭಿವೃದ್ಧಿ ವಿಷಯವನ್ನಿಟ್ಟುಕೊಂಡು ನಾವು ಚುನಾವಣೆ ಎದುರಿಸಿದ್ದೆವು, ಮತದಾರರು ಅದನ್ನು ಒಪ್ಪಿ ಪಕ್ಷದ ಮೇಲೆ ವಿಶ್ವಾಸವಿಟ್ಟು ಮುನಿರತ್ನ ಮತ್ತು ಡಾ.ರಾಜೇಶ್ ಗೌಡರನ್ನು ಗೆಲ್ಲಿಸಿದ್ದಾರೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.