ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಮೀನನ್ನು ಬೆಳಗಾವಿ ಮಹಾನಗರ ಪಾಲಿಕೆಯಿಂದ ನೀಡಲು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ಮಹಾನಗರಪಾಲಿಕೆಯ ಪ್ರಸ್ಥಾಪವನ್ನು ಸಚಿವ ಸಂಪುಟ ಒಪ್ಪಿಗೆ ನೀಡಿ ಅನುಮೋದನೆ ನೀಡಲಾಗಿದೆ ಮಾಜಿ ಶಾಸಕರು ಹಾಗೂ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರು ಶ್ರೀ ಸಂಜಯ್ ಬಿ ಪಾಟೀಲ್ ಅವರು ಜಿಲ್ಲಾ ಕೇಂದ್ರದಲ್ಲಿ ಒಂದು ಭಾರತೀಯ ಜನತಾ ಪಾರ್ಟಿಯ ಸ್ವಂತ ಕಚೇರಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಲ್ಲಿ ಅನೇಕ ಬಾರಿ ಬೇಡಿಕೆಯನ್ನು ಇಟ್ಟಿದ್ದರು ಅದನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಎಲ್ಲ ಸಚಿವರುಗಳು ಆ ಕನಸನ್ನು ನನಸಾಗಿ ಮಾಡಿದ್ದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರ ಪರವಾಗಿ ಹಾಗೂ ಕಾರ್ಯಕರ್ತರ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲೆಯ ಎಲ್ಲ ಸಚಿವರಿಗೆ ಹಾಗೂ ಬೆಳಗಾವಿ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾದ ಶ್ರೀ ಸಂಜಯ ಬಿ ಪಾಟೀಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ ಕಾರ್ಯಕರ್ತರು.
