SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ *ಪ್ರಗತಿ ಪರಿಶೀಲನಾ ಸಭೆ* ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.