ನಿನ್ನೆ ಬೆಳಗಾವಿಯಲ್ಲಿ ನಡೆದ *ಜನಸೇವಕ ಸಮಾವೇಶ* ವು ಯಶಸ್ವಿಯಾಗಿ ಮುಕ್ತಾಯವಾಗಿದ್ದು, ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರಿಗೆ ಮತ್ತಷ್ಟು ಕೆಲಸ ಮಾಡಲು ಉತ್ತೇಜಿಸಿದ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸರ್ಕಾರದ ಗೃಹ ಸಚಿವರಾದ *ಶ್ರೀ ಅಮಿತ್ ಶಾ*, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ *ಶ್ರೀ ಬಿಎಸ್ ಯಡಿಯೂರಪ್ಪ*, ಕೇಂದ್ರ ಸಚಿವರಾದ *ಶ್ರೀ ಪ್ರಲ್ಹಾದ್ ಜೋಶಿ* ಮತ್ತು ಬಿಜೆಪಿ ರಾಜ್ಯಾಧ್ಯಕ್ಷ *ಶ್ರೀ ನಳಿನ್ ಕುಮಾರ್ ಕಟೀಲ್* ಅವರಿಗೆ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.
ಹಾಗೆಯೇ ಯಶಸ್ಸಿಗೆ ಪ್ರತಿಹಂತದಲ್ಲೂ ಕೆಲಸ ಮಾಡಿದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಸಂಸತ್ ಸದಸ್ಯರು, ಎಲ್ಲಾ ಜನಪ್ರತಿನಿಧಿಗಳು ಮತ್ತು ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳಿಗೆ ಸಚಿವ *ರಮೇಶ್ ಜಾರಕಿಹೊಳಿ* ತಮ್ಮ ಆಭಾರವನ್ನು ವ್ಯಕ್ತಪಡಿಸಿದ್ದಾರೆ.
ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಅವಿಭಜಿತ ಬೆಳಗಾವಿ ಮತ್ತು ನೆರೆಯ ಜಿಲ್ಲೆಗಳ ನೂತನ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಬಿಜೆಪಿ ಕಾರ್ಯಕರ್ತರಿಗೆ ಸಚಿವ *ರಮೇಶ್ ಜಾರಕಿಹೊಳಿ* ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.