Breaking News

*ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್ – ಜನಪರ ಬಜೆಟ್ ಸ್ವಾಗತಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌*


ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ‌ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು‌ ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಕೋವಿಡ್‌ ನಂತರ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಮರ್ಥವಾಗಿ ಮುನ್ನಡೆಸುವ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು ಸಂಕಷ್ಟದ ಮಧ್ಯೆಯೂ ರೈತರಿಗೆ ನೀಡುತ್ತಿರುವ ಕನಿಷ್ಠ ಬೆಂಬಲ ಬೆಲೆಯನ್ನು ಮುಂದುವರಿಸಿರುವುದು ರೈತರ ಬಗ್ಗೆ ಕೇಂದ್ರ ಸರಕಾರಕ್ಕಿರುವ ಬದ್ಧತೆಯನ್ನು ತೋರಿಸುತ್ತದೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಅನಗತ್ಯವಾಗಿ ಗಲಭೆ ಮಾಡುತ್ತಿರುವವರಿಗೆ ಸ್ಪಷ್ಟ ಉತ್ತರ ನೀಡಿದಂತಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಶ್ರೀಮತಿ ನಿರ್ಮಲಾ ಸೀತಾರಾಮನ್‌ ಅವರು ದೇಶದ ಎಲ್ಲ ಆಯಾಮಗಳನ್ನು ಒಳಗೊಂಡ ಹಾಗೂ ಪ್ರಗತಿಯತ್ತ ಮುನ್ನಡೆಸಲು ಬೇಕಾದ ಸಮರ್ಥ ಕಾರ್ಯಸೂಚಿಯನ್ನು ಅನಾವರಣ ಮಾಡಿದ್ದಾರೆ. ಜೊತೆಗೆ ತುರ್ತು ಆದ್ಯತೆಗಳ ಬಗ್ಗೆ ಗಮನ ಹರಿಸಿದ್ದಾರೆ. ಪಕ್ಷಾತೀತವಾಗಿ ಈ ಬಜೆಟ್ ನ್ನು ಸ್ವಾಗತಿಸೋಣ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಪ್ರತಿಕ್ರಿಯಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ