ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ *ಶ್ರೀ ರಾಜನಾಥ ಸಿಂಗ್* ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಭೇಟಿ ಮಾಡಿ ಚರ್ಚೆ ನಡೆಸಿದರು.
ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ *ರಮೇಶ್ ಜಾರಕಿಹೊಳಿ*, ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ ಮಾಡಿದರು. ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂ ಪತ್ರ ಬರೆದು ಮನವಿ ಸಲ್ಲಿಸಲಾಗುವುದು ಎಂದು ಸಚಿವ *ರಮೇಶ್ ಜಾರಕಿಹೊಳಿ* ಹೇಳಿದರು.