Breaking News

*ಮಹದಾಯಿ ವಿವಾದ:ನ್ಯಾಯಾಂಗ ನಿಂದನೆಗೆ ಸಂಬಂಧಿಸಿ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ-ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ


ನವದೆಹಲಿ : ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿದೆಯೇ ಹೊರತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ *ರಮೇಶ್ ಜಾರಕಿಹೊಳಿ* ಸ್ಪಷ್ಟನೆ ನೀಡಿದ್ದಾರೆ.

ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿ ಪ್ರವಾಸ ಕೈಗೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದು, ಕರ್ನಾಟಕ ರಾಜ್ಯವು ಮಹದಾಯಿ ನದಿ ನೀರನ್ನು ಮಲಪ್ರಭೆಯತ್ತ ಹರಿಸಿದ್ದು, ಇದರಿಂದ ಗೋವಾಕ್ಕೆ ನೀರು ಹರಿಯುತ್ತಿಲ್ಲ ಎಂಬ ವಾದವನ್ನು ರಾಜ್ಯ ಪರ ವಕೀಲರು ಸಮರ್ಥವಾಗಿ ಎದುರಿಸಿದರು ಎಂದು ಹೇಳಿದ್ದಾರೆ.

ಈ ಅರ್ಜಿ ವಿಚಾರಣೆ ವೇಳೆ ಉಭಯ ಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್ ಮೂರೂ ಅರ್ಜಿದಾರರಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾಗಳಿಗೆ ತಲಾ ಓರ್ವ ಸೂಪರಿಂಟೆಂಡೆಂಟ್ ಇಂಜಿನಿಯರ್‌ಗಳನ್ನು ನೇಮಿಸುವಂತೆ ಸೂಚನೆ ನೀಡಿದ್ದು, ಈ ಮೂರೂ ಮಂದಿ ಸ್ಥಳ ಪರಿಶೀಲನೆ ನಡೆಸಿ ಸುಪ್ರೀಂ ಕೋರ್ಟ್‌ಗೆ ಈ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಿದೆ ಎಂದು ಸಚಿವ *ರಮೇಶ್ ಜಾರಕಿಹೊಳಿ* ತಿಳಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!

  ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ