ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆ ಕಲಾಪದ ವೇಳೆ ಮಾಹಿತಿ ನೀಡಿದ್ದಾರೆ. ಸಾರಿಗೆ ನೌಕರರನ್ನ ಸರ್ಕಾರಿ ನೌಕರರಾಗಿ ಮಾಡುವಂತೆ ಶಾಸಕ ಜಿ. ಟಿ. ದೇವೇಗೌಡ ಒತ್ತಾಯ ಮಾಡಿದ್ರು. ಈಗಾಗಲೇ ಸಾರಿಗೆ ನೌಕರರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೀಗಾಗಿ ಅವರನ್ನ ಕರೆದು ಮಾತುಕತೆ ನಡೆಸುವಂತೆ ಜಿಟಿಡಿ ಸರ್ಕಾರಕ್ಕೆ ಒತ್ತಾಯಿಸಿದ್ರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ, ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ. ಈಗಿರುವ ಆರ್ಥಿಕ ಪರಿಸ್ಥಿತಿಯಲ್ಲಿ ಅವರ ಬೇಡಿಕೆ ಈಡೇರಿಸಲು ಕಷ್ಟ ಅಂತ ಹೇಳಿದ್ರು. ಜೊತೆಗೆ ನವೆಂಬರ್ ತನಕ ಎಲ್ಲಾ ಸಾರಿಗೆ ನೌಕರರಿಗೆ ವೇತನ ನೀಡಲಾಗಿದೆ.ಡಿಸೆಂಬರ್ ತಿಂಗಳ ವೇತನವನ್ನ 8-10 ದಿನಗಳಲ್ಲಿ ನೀಡಲಾಗುತ್ತೆ ಅಂತಾನೂ ಹೇಳಿದ್ರು.
Check Also
“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!
ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ …