ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟ ನಿರತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದು, ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.
ಮುಷ್ಕರ ಕೈಬಿಡಲು ಸಿಎಂ ಮನವಿ ಮಾಡಿದ್ದು, ಸಾರಿಗೆ ನೌಕರರ ಪ್ರತಿಭಟನೆ ವಾಪಸ್ ಪಡೆಯಬೇಕು. ಸದ್ಯ ಸರ್ಕಾರದ ಪರಿಸ್ಥಿತಿ ಸರಿ ಇಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸದ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ನಿಮ್ಮ ಬೇಡಿಕೆ ಈಡೇರಿಸುವುದು ಕಷ್ಟ ಎಂದು ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಕಾರಣ ಕೆಲಸಕ್ಕೆ ತೆರಳುವವರು, ಊರಿಗೆ ಹೋಗುವವರು, ಪ್ರಯಾಣಿಕರು ಕಾದು ಕಾದು ಸಾಕಾಗಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.