ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ಬಿದ್ದಿದೆ.
ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ.
ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್ ಆಗಿದ್ದು, ಮುಷ್ಕರ ಕೈ ಬಿಡುವ ಬಗ್ಗೆ ಫ್ರೀಡಂ ಪಾರ್ಕ್ನಲ್ಲಿ ಘೋಷಣೆ ಮಾಡುವುದಾಗಿ ರೈತಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಸರ್ಕಾರಿ ನೌಕರರ ಆರನೇ ವೇತನ ಜಾರಿ ಮಾಡಲು ಒಪ್ಪಿಗೆ ನೀಡಿದೆಯಾದರೂ ಸರ್ಕಾರಿ ನೌಕರರು ಅಂತ ಪರಿಗಣಿಸಲ್ಲ ಎಂದು ಸರ್ಕಾರ ಸ್ಪಷ್ಟನೆ ಕೊಟ್ಟಿದೆ.
ಕೋವಿಡ್ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ, ಸಿಬ್ಬಂದಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ.
ಇನ್ನು ಇಂದು(ಭಾನುವಾರ) ರಾತ್ರಿಯಿಂದಲೇ ಸಾರಿಗೆ ಬಸ್ ಸಂಚಾರ ಆರಂಭ ಆಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ