ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಂಬಂಧ ನಿರ್ದೇಶಕ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ನಟಿ ಮೇಘನಾ ರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೇಘನಾ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.
ಮೇಘನಾ ರಾಜ್ ರಿಂದ ವಾಣಿಜ್ಯ ಮಂಡಳಿಗೆ ಪತ್ರ
ನನ್ನ ಪತಿ ತೀರಿಕೊಂಡು ಮೂರು ತಿಂಗಳು ಕಳೆದಿಲ್ಲ. ಆಗಲೇ ಅವರ ಮೇಲೆ ಇಲ್ಲಸಲ್ಲದ ಆರೋಪ ಹೇರಲಾಗ್ತಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದೆ. ಗರ್ಭವತಿ ಆಗಿರುವ ನಾನು ಮಾನಸಿಕವಾಗಿ ಕುಗ್ಗಿದ್ದೇನೆ. ಇಂತಹ ಬೆಳವಣಿಗೆಯಿಂದ ಬೇಸರವಾಗಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನಮ್ಮ ಕುಟುಂಬಕ್ಕೆ ಬೇಸರವಾಗಿದೆ. ಹೀಗಾಗಿ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಮೇಘನಾ ಪತ್ರದಲ್ಲಿ ಬರೆದಿದ್ದಾರೆ.
ಮೇಘನಾರಾಜ್ ಬರೆದ ಪತ್ರವನ್ನು ಸ್ವೀಕರಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ, ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆಯಾಚಿಸುವಂತೆ ಸೂಚಿಸಿ ಪತ್ರ ಬರೆಯಲು ವಾಣಿಜ್ಯ ಮಂಡಳಿ ನಿರ್ಧರಿಸಿದೆ.
ಮತ್ತೊಂದೆಡೆ, ಪತ್ರದ ಹಿನ್ನೆಲೆಯಲ್ಲಿ ಮೇಘನಾರಾಜ್ ನಿವಾಸಕ್ಕೆ ಹೋಗಿ ಸಾಂತ್ವನ ಹೇಳುತ್ತೇನೆ ಎಂದು ವಾಣಿಜ್ಯ ಮಂಡಳಿ ಕಾರ್ಯಾಧ್ಯಕ್ಷ ಎಂ.ಎನ್ ಸುರೇಶ್ ತಿಳಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA