ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ.
ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು.
ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ಸುರೇಶ್ ಅಂಗಡಿಯವರು ಮೇ 2009 ರಲ್ಲಿ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿಪ್ರಮಾಣವಚನ ಸ್ವೀಕರಿಸಿದರು.