ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿಯವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಸರಳ ವ್ಯಕ್ತಿತ್ವ ಹೊಂದಿದ್ದ ಇವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಇವರ ಅಗಲಿಕೆಯಿಂದ ಜಿಲ್ಲೆಯ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.
