ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೊನಾದಿಂದ ರಾಜ್ಯದಲ್ಲಿ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್ ಲೈನ್ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಳೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ.
ಶಾಲೆ ಆರಂಭದ ಕುರಿತಂತೆ ಈಗಾಗಲೇ ಶಿಕ್ಷಣ ತಜ್ಞರ ಸಮಿತಿ ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪರನ್ನು ಭೇಟಿ ಆಗಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೋವಿಡ್ ತಾಂತ್ರಿಕ ಸಲಹೆಯಂತೆ ಶಾಲೆ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ ಎನ್ನಲಾಗಿದೆ. ಹೀಗಾಗಿ ರಾಜ್ಯದಲ್ಲಿ ಜುಲೈ 3 ನೇ ವಾರದ ಬಳಿಕ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.