Breaking News

ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ


ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.

ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ , ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ , ಅದನ್ನು ದಾನಿಗಳಿಂದಲೆ ಪಡೆಯಬೇಕು. ರಕ್ತದಾನ ಮಾಡಿ ಜೀವ ಉಳಿಸಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಪಾಲ್ಗೋಳುವ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವಂತರಾಗಿ ಒಳ್ಳೆಯ ನಾಗರಿಕರಾಗಿರೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ ಪಾಟೀಲ, ರೋಟರಿ ಸಂಸ್ಥೆಯ ಡಾ.ಬಿ.ಆರ್.ಕಪ್ಪಲಗುದ್ದಿ, ವಿನೋದ ಸುಪಲಿ , ಪ್ರಾಚಾರ್ಯರಾದ ಐ.ಎಸ್.ಪವಾರ, ಅರುಣ್ ಪೂಜೇರ, ಎ.ಬಿ.ಪಾಟೀಲ ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ