ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕು. ಶೋಭಾ ಕರಂದ್ಲಾಜೆ ಅವರು ನವದೆಹಲಿಯಲ್ಲಿಂದು ಅಧಿಕಾರ ಸ್ವೀಕರಿಸಿದರು.
ನಿನ್ನೆ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದಂತ ಕರ್ನಾಟಕ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಇಂತಹ ಖಾತೆಯನ್ನು, ಇಂದು ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ ಕು.ಶೋಭಾ ಕರಂದ್ಲಾಜೆ ಸ್ವೀಕರಿಸಿದರು.
ಈ ಬಳಿಕ ಮಾತನಾಡಿದಂತ ಅವರು, ಕರ್ನಾಟಕ ಜನರು ನನ್ನನ್ನು ತುಂಬಾ ಪ್ರೀತಿಸುತ್ತಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಇದೆ. ಪ್ರಧಾನಿ ಮೋದಿಯವರ ಕನಸು ನನಸು ಮಾಡುತ್ತೇನೆ. ತೋಮರ್ ಜೊತೆಗೆ ಉತ್ತಮ ರೀತಿಯಲ್ಲಿ ಕೆಲಸ ಮಾಡುವೆ. ರೈತರ ಹಿತದೃಷ್ಠಿಯಿಂದ ಕೆಲಸ ಮಾಡುತ್ತೇನೆ. ರೈತ ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತೇನೆ ಎಂಬುದಾಗಿ ತಿಳಿಸಿದರು.
CKNEWSKANNADA / BRASTACHARDARSHAN CK NEWS KANNADA