ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಕೊರೊನಾಗೆ ಬಲಿಯಾಗಿದ್ದಾರೆ.
ಬೆಂಗಳೂರಿನ ನಿವಾಸಿ ರಮೇಶ (43) ಮೃತ ವ್ಯಕ್ತಿಯಾಗಿದ್ದಾರೆ. ಕಳೆದ 10 ವರ್ಷಗಳಿಂದ ಇವರು ಸತೀಶ ಜಾರಕಿಹೊಳಿ ಅವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಸತೀಶ ಅವರು ಬೆಂಗಳೂರಿಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮೃತ ರಮೇಶ ಅವರು ಗನ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಕಳೆದ ಕೆಲ ದಿನಗಳ ಹಿಂದೆ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಸತೀಶ ಜಾರಕಿಹೊಳಿ ಸಂತಾಪ:
ತಮ್ಮ ಗನ್ ಮ್ಯಾನ್ ಕೊರೊನಾದಿಂದ ಮೃತಪಟ್ಟಿದ್ದಕ್ಕೆ ಸತೀಶ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.