ಗೋಕಾಕ ಮತಕ್ಷೇತ್ರದ 22 ಗ್ರಾಪಂ, 4 ಪಪಂ, ಒಂದು ನಗರಸಭೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ: ಗೋಕಾಕ ಮತಕ್ಷೇತ್ರದ 22 ಗ್ರಾಮ ಪಂಚಾಯತ, 4 ಪಟ್ಟಣ ಪಂಚಾಯತ ಹಾಗೂ ಒಂದು ನಗರಸಭೆಯ ಸಿಬ್ಬಂದಿಗಳಿಗೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆ ಮಾಡಿದ್ದಾರೆ.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಗ್ರಾಮೀಣ ಮಟ್ಟದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಗ್ರಾಮ ಪಂಚಾಯತಗಳ ಪಾತ್ರ ಅತ್ಯಂತ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಮಾರುತಿ ಗುಟಗುದ್ದಿ, ಪಾಂಡು ರಂಗಸುಬೆ, ಇಮ್ರಾನ್ ಶಿವಾಪುರಿ, ರಾಹುಲ್ ಬಡೆಸಗೋಳ, ಶಿವು ಕಿಲಾರಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತ, ಪಟ್ಟಣ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು.
ತಾಲೂಕು ಆಸ್ಪತ್ರೆ ಸಿಬ್ಬಂದಿಗೆಮಾಸ್ಕ್, ಸ್ಯಾನಿಟೈಸರ್ ವಿತರಣೆ:
ನಂತರ ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ರಾಹುಲ್ ಅವರು ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಿದರು.
ಈ ಸಂದರ್ಭದಲ್ಲಿ ರಾಹುಲ್ ಜಾರಕಿಹೊಳಿ ಅವರು ಗೋಕಾಕ ವೈದ್ಯಾಧಿಕಾರಿಗಳೊಂದಿಗೆ ತಾಲೂಕಿನ ಕೋವಿಡ್ ಸ್ಥಿತಿಗತಿಯ ಕುರಿತು ಚರ್ಚೆ ನಡೆಸಿದರು. ಕೊರೊನಾ ಗೆಲ್ಲಲು ವೈದ್ಯರು ಹಾಗೂ ಸಿಬ್ಬಂದಿಗಳ ಪಾತ್ರ ಮುಖ್ಯವಾಗಿದೆ. ಹೀಗಾಗಿ, ಆರೋಗ್ಯ ಇಲಾಖೆ ಸಿಬ್ಬಂದಿಯ ಸುರಕ್ಷತೆಗೆ ನಾವು ಆದ್ಯತೆ ನೀಡುತ್ತಿದ್ದೇವೆ. ಎಲ್ಲರೂ ಕೂಡಿ ಮಹಾಮಾರಿ ಕೊರೊನಾ ವಿರುದ್ಧ ಹೋರಾಡಬೇಕಿದೆ” ಎಂದು ಹೇಳಿದರು.
ತಾಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಮುತ್ತಣ ಕೊಪ್ಪದ, ಮಾರುತಿ ಗುಟಗುದ್ದಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.