ಬೆಳಗಾವಿ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಬಹುಭಾಷಾ ಗಾಯಕ ಎಸ್‍ಪಿಬಿ ಅವರು ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ ಸಂಗೀತ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.