ಗೋಕಾಕ: ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕನ ಪೆಟ್ರೋಲ್ ಬಂಕ್ ಎದುರು ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಗೋಕಾಕ ಹಾಗೂ ಅರಭಾವಿ ತಾಲೂಕಿನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಗೋಕಾಕ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಪ್ರಕಾಶ ಡಾಂಗೆ ಹಾಗೂ ಮುಖಂಡ ವಿವೇಕ ಜತ್ತಿ ಮನವಿ ಮಾಡಿದ್ದಾರೆ.
CKNEWSKANNADA / BRASTACHARDARSHAN CK NEWS KANNADA