ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.
ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ.
ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. ಹಿಲ್ ಗಾರ್ಡನ್ ಕಚೇರಿ ಸಿಬ್ಬಂದಿ ಬಾಗೇವಾಡಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
CKNEWSKANNADA / BRASTACHARDARSHAN CK NEWS KANNADA