ಯಮಕನಮರಡಿ: ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮತಕ್ಷೇತ್ರದ ಮಾವನೂರ ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳನ್ನು ಇಂದು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಪ್ರಿಯಾಂಕಾ ಅವರು ಗ್ರಾಮ ಪಂಚಾಯತ್ 14ನೇ ಹಣಕಾಸು ಯೋಜನೆಯಡಿ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು ನೂತನ ಕೊಠಡಿಗಳನ್ನು ಹಾಗೂ ಕ್ರೀಡಾ ಸಾಮಗ್ರಿಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಮುಖಂಡರಾದ ಕುಮಾರ ಗುಡಗನಟ್ಟಿ, ಶಿವಪ್ಪ ಈರನಟ್ಟಿ, ಯಲ್ಲನಾಯ್ಕ ಲಟ್ಟೆ, ಮಂಜುಗೌಡ ಪಾಟೀಲ, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್ ಡಿಎಂಸಿ ಸದಸ್ಯರು, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
CKNEWSKANNADA / BRASTACHARDARSHAN CK NEWS KANNADA