ಹುಬ್ಬಳ್ಳಿ : ‘ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ, ಪಕ್ಷ ಸಂಘಟನೆಯಲ್ಲಿ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಗುರುವಾರ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಮೊದಲೆ ಹಾಗೂ ಎರಡನೇ ಅಲೆಯಲ್ಲಿ ಮಹಿಳಾ ಕಾಂಗ್ರೆಸ್ ಬಡವರಿಗೆ ಕಿಟ್ ನೀಡುವ ಮೂಲಕ ಒಳ್ಳೆಯ ಕಾರ್ಯವನ್ನು ಮಾಡಿದ್ದೀರಿ ಎಂದು ಶ್ಲಾಘೀಸಿದರು.
‘ ಕಾಂಗ್ರೆಸ್ ಪಕ್ಷ ಸಂಘಟನೆಗೆ ಮಹಿಳಾ ಸದಸ್ಯರು ಕೈಗೊಂಡಿರುವ ಕಾರ್ಯವನ್ನು ಪ್ರೋತ್ಸಾಹಿಸಲು ಆಗಮಿಸಿದ್ದೇವೆ, ನಿಮ್ಮೊಂದಿಗೆ ನಾವು ಇರಲಿದ್ದೇವೆ. ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಿ, ನಮ್ಮ ಸಂಪೂರ್ಣ ಬೆಂಬಲ ಇರಲಿದೇ’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ದ್ರುವ ನಾರಾಯಣ್, ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯ, ಹುಬ್ಬಳ್ಳಿ ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ದೀಪಾ ನಾಗರಾಜ ಗೌರಿ, ರಾಜ್ಯ ಎಸ್ಟಿ ಘಟಕದ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಸದಾನಂದ್ ಡಮ್ಮನವರ, ರಾಜಶೇಖರ ಮೆಣಸಿನಕಾಯಿ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ್ ಪಾಟೀಲ, ಸುರೇಶ ಸವಣೂರ ಇದ್ದರು.