ಬೆಳಗಾವಿ: ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಜಾಪರವಾಡಿ, ಕಡೋಲಿ, ದೇವಗಿರಿ ಹಾಗೂ ಕಾಕತಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಕತಿ, ಹೊನಗಾ, ಜಮನಾಳ, ಕೆಂಚನಟ್ಟಿ, ಬೈಲೂರ, ಮಳವಳ್ಳಿ, ಹೊಸವಂಟಮುರಿ ಗ್ರಾಮಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಇಂದು ಭೇಟಿ ನೀಡಿ ಪ್ರವಾಹದಿಂದಾದ ಹಾನಿ ಪರಿಶೀಲನೆ ಮಾಡಿದರು.
ಈ ಗ್ರಾಮಗಳಲ್ಲಿ ಪ್ರವಾಹ ಹಾಗೂ ಮಳೆಯಿಂದಾಗಿ ಮನೆ, ಬೆಳೆ, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದ್ದು, ಇವುಗಳನ್ನು ರಾಹುಲ್ ಪರಿಶೀಲಿಸಿದರು.
ಸಂತ್ರಸ್ತರಿಗೆ ಸಾಂತ್ವನ:
ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ಕೂಡ ವೀಕ್ಷಿಸಿದರು.
ಈ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ರಾಹುಲ್ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಅರುಣ ಕಟಾಂಬಳೆ, ರಾಜು ಮಾಯಣ್ಣ, ರಾಜು ಕೊಟ್ರೆ, ನಿರ್ಮಲಾ ನರೋಡೆ, ಅಶ್ವಿನಿ ಪಾಟೀಲ, ಗೌಡಪ್ಪ ಪಾಟೀಲ, ಡಿ.ಬಿ. ಸುತಾರ, ರಾಜು ಸುತಾರ, ನಿಂಗಪ್ಪ ಪಾಟೀಲ, ಪುಂಡಲೀಕ ಬಾತ್ಕಂಡೆ, ಗಜು ಕಾಗಣಿಕರ್, ಮಲ್ಲಗೌಡ ಪಾಟೀಲ ಸೇರಿ ಇನ್ನಿತರರು ಇದ್ದರು.