ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.
ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು ಪರಿಶೀಲನೆ ಮಾಡಿದರು. ಸಂತ್ರಸ್ತರು ಹಾಗೂ ಗ್ರಾಮಸ್ಥರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು
ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ ಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿಯವರ ಗಮನಕ್ಕೆ ತಂದು, ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಸಂತ್ರಸ್ತರಿಗೆ ರಾಹುಲ್ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಯಲ್ಲಪ್ಪ ಬುಡ್ರಿ, ಯಲ್ಲಪ್ಪ ಪೂಜೇರಿ, ಬಾಳೇಶ ದಾಸನಟ್ಟಿ, ಬಸು ನಾಯಕ್, ಸುರೇಶ ನಾಯಕ್, ಕರೆಪ್ಪಾ ನಾಯಿಕ, ಮಲ್ಲಿಕ್ ಮುಲ್ಲಾ, ಬಾಲಪ್ಪಾ ಗುಜನಾಳ, ಪರಶುರಾಮ ನಾಯಿಕ್ ಹಾಗೂ ಗ್ರಾಮಸ್ಥರು ಇದ್ದರು.