ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ
ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.
ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರು.
28ನೇ ವಾರ್ಡ್ ನ ನಾತ್ ಪೈ ಸರ್ಕಲ್ ನಲ್ಲಿ ಅಭ್ಯರ್ಥಿ ಪರಸು ಕಾಂಬಳೆ ಪರವಾಗಿ, 22ನೇ ವಾರ್ಡ್ ನ ಶಹಪೂರದಲ್ಲಿ ಭೋಪಾಲ ಅತ್ತು ಪರ, 51ನೇ ವಾರ್ಡ್ ನ ಅನಗೋಳದಲ್ಲಿ ಹಾಗೂ 52ನೇ ವಾರ್ಡ್ ಕಫಿಲೇಶ್ವರ ದಲ್ಲಿ ಸಂಜಯ ಭಜಂತ್ರಿ ಪರ ಮತ್ತು 27ನೇ ವಾರ್ಡ್ ನ ಅಳವಾನ ಗಲ್ಲಿಯಲ್ಲಿ ಅರ್ಜುನ ದೇಮಟ್ಟಿ ಪರ ಅವರು ಪ್ರಚಾರ ನಡೆಸಿದರು.
ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಪಕ್ಷದ ಧ್ಯೇಯ:
ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದ್ದು, ಜನರ ಕಷ್ಟ, ನಷ್ಟಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಪಕ್ಷದ ಧ್ಯೇಯವಾಗಿದೆ. ಹೀಗಾಗಿ, ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತದಾರರು ಬಹುಮತದಿಂದ ಗೆಲ್ಲಿಸಬೇಕೆಂದು ಮುಖಂಡರು ಮನವಿ ಮಾಡಿದರು.
ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ್, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ (ಆಡಳಿತ) ಪ್ರದೀಪ ಎಂ.ಜೆ., ಮುಖಂಡರಾದ ವೀರಕುಮಾರ ಪಾಟೀಲ, ಕಾಕಾಸಾಹೇಬ ಪಾಟೀಲ, ಸಿದ್ದು ಸುಣಗಾರ, ಪರಶುರಾಮ ಡಾಗೆ ಸೇರಿ ಇನ್ನಿತರರು ಇದ್ದರು.