ಬೆಳಗಾವಿ : ಬೆಳಗಾವಿ ಪಾಲಿಕೆ ಚುನಾವಣೆಗೆ ವಾರ್ಡ್ ನಂ.55ರಿಂದ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ಮುತ್ಯಾನಟ್ಟಿಯ ಸೋನಲ ಸಂಜಯ ಸುಂಟಕರ, ಖಾಸಬಾಗದ ವಾರ್ಡ ನಂ 21 ಅಭ್ಯರ್ಥಿ ಸರಳಾ ಸಾತಪುತೆ, ವಾರ್ಡನಂ 22 ಅಭ್ಯರ್ಥಿ ಸಲೀಂ ಸನದಿ, ವಾರ್ಡ ನ. 52ರ ಅನಗೋಲ ಕುರಶಿದ ಮುಲ್ಲಾ ಪರ ಮಾಜಿ ಸಚಿವ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು.
ಇದೇ ವೇಳೆ ಎಂ.ಬಿ.ಪಾಟೀಲ ಮಾತನಾಡಿ, ರಾಜ್ಯದ ಪ್ರಭಾವಿ ನಾಯಕರು, ಒಳ್ಳೆಯ ಕೆಲಸಗಾರರು ಆದ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಅವರು ಬೆಳಗಾವಿ ಜಿಲ್ಲೆಯಲ್ಲಿ ಶಾಸಕರಾಗಿ, ಸಚಿವರಾಗಿ ಅನೇಕ ಕಾರ್ಯಗಳನ್ನು ಮಾಡಿದ್ದಾರೆ. ಮುಂದೆಯೂ ಸಹ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಕಾಂಗ್ರೆಸ್ ಅಭ್ಯರ್ಥಿಗೆ ವೋಟ್ ನೀಡುವ ಮೂಲಕ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ವಾರ್ಡ್ ನಂ.55 ರಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಗುರುತಿಸಲಾಗಿದೆ. ಬೆಳಗಾವಿ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸಲಾಗುತ್ತಿದೆ. ಆದ್ದರಿಂದ ಎಲ್ಲ ವಾರ್ಡ್ ಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದೆ ಆದ್ರೆ, ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಭರವಸೆ ನೀಡಿದರು.
ಕಳೆದ 13 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿದ್ದು, ಅವುಗಳಲ್ಲಿ ಯಶಸ್ವಿಯೂ ಕೂಡಾ ಆಗಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಹಿಡಕಲ್ ಡ್ಯಾಂ ದಿಂದ ನೀರು ಪೂರೈಕೆ ಕಾಮಗಾರಿ ಚಾಲನೆ ನೀಡಿದ್ದು, ಕೆಲಸ ನಡೆಯುತ್ತಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಮುಂಬರುವ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ವಾರ್ಡ್ ನಂ.55ರಿಂದ ಸೋನಲ ಅವರು ಸ್ಪರ್ಧಿಸಿದ್ದು, ಅವರಿಗೆ ಆಶೀರ್ವಾದ ಮಾಡಬೇಕು. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ವೋಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮತದಾರರಲ್ಲಿ ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ವಿನಯ ನಾವಲಗಟ್ಟಿ, ಸಿದ್ದು ಸುಣಗಾರ, ಸಂಜಯ ಸುಂಟಕರ, ಸುರೇಶ ನಾಯ್ಕ, ಹಬೀಬ ಶಿಲ್ಲೇದಾರ, ಪ್ರದೀಪ ಎಂ.ಜೆ., ಕಾಂಗ್ರೆಸ್ ಕಾರ್ಯಕರ್ತರು ಇದ್ದರು.