ಬೆಳಗಾವಿ : ಯಮಕನಮರಡಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿನ ವಿವಿಧ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಶುಕ್ರವಾರ ಚಾಲನೆ ನೀಡಿದರು.
ಕಡೋಲಿ,ಕೇದನೂರ, ಮನ್ನಿಕೇರಿ, ಗಂದಿಗನೂರ ಸೇರಿದಂತೆ ಬೇರೆ ಬೇರೆ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಚಾಲನೆ ದೊರೆಯಿತು. ಬಳಿಕ ಸತೀಶ್ ಜಾರಕಿಹೊಳಿ ಮಾತನಾಡಿ, ಗುತ್ತಿಗೆದಾರರು ಗುಟ್ಟಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಅಧಿಕಾರಿಗಳು ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಂತರ ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಕೋವಿಡ್ ಬಳಿಕ ಶಾಲೆ ಆರಂಭವಾಗಿದ್ದು ಶಾಲೆಯಲ್ಲಿನ ಕುಂದು ಕೊರತೆಯನ್ನು ಪರಿಶೀಲಿಸಿ, ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಶಾಲೆಯ ಶಿಕ್ಷಕರು, ಗ್ರಾಮದ ಮುಖಂಡರು ಇದ್ದರು.