ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ 7.5 ಮೀಸಲಾತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಪ್ರೀಡಂ ಪಾರ್ಕ ನಲ್ಲಿ ಕಳೆದ ಎರಡು ದಿನಗಳಿಂದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಅವರು ಇಂದು ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿ ವಾಲ್ಮೀಕಿ ಮೀಸಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ನಿನ್ನೆಯಷ್ಟೇ ಪ್ರತಿಭಟನಾ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಬಿ. ಶ್ರೀರಾಮುಲು, ಶಾಸಕ ರಾಜುಗೌಡ ನಾಯಿಕ ಸೇರಿದಂತೆ ಹಲವರು ಭೇಟಿ ನೀಡಿದ್ದರು.
ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಾಲ್ಮೀಕಿ ಸಮುದಯಾಕ್ಕೆ ಶೇ. 7. 5 ಮೀಸಲಾತಿಗೆ ಹೆಚ್ಚಿಸಬೇಕು ಎಂದು ಹಲವು ದಶಕದ ಬೇಡಿಕೆಯಾಗಿದೆ. ನಿವೃತ್ತ ನ್ಯಾ. ನಾಗಮೋಹನ ದಾಸ್ ನೇತೃತ್ವದ ಸಮಿತಿ ಮೀಸಲಾತಿ ಹೆಚ್ಚಿಸುವ ವಿಚಾರವಾಗಿ ವರದಿಯಲ್ಲಿ ಸರ್ಕಾರಕ್ಕೆ ಒಪ್ಪಿಸಿ 3 ತಿಂಗಳು ಕಳೆದಿದೆ. ಆದ್ರು ಕೂಡ ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಅ. 30 ರಂದು ಬರಲಿರುವ ಮಹರ್ಷಿ ವಾಲ್ಮೀಕಿ ಜಯಂತಿಯೊಳಗೆ ಸಮುದಾಯಕ್ಕೆ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು ಒತ್ತಾಯಿಸಿ ಏಕಾಂಗಿಯಾಗಿ ಹೋರಾಟ ಆರಂಭಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿಯೊಳಗಡೆ ಮೀಸಲಾತಿ ಘೋಷಣೆ ಮಾಡದಿದ್ದಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದರು.