ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಅಲತಗಾ ಗ್ರಾಮದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಅಲತಗಾ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ, ಮೂರು ಅಂಗನವಾಡಿಗಳ ದುರಸ್ತಿ ಕಾಮಗಾರಿ ಹಾಗೂ ಸರ್ಕಾರಿ ಶಾಲೆಯ ಕೊಠಡಿಗಳ ನಿರ್ಮಾಣ ಕಾಮಗಾರಿ ಸೇರಿದಂತೆ ಒಟ್ಟು 35 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸತೀಶ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಹಾಗೂ ಗುಣಮಟ್ಟದಲ್ಲಿ ಕೈಗೊಳ್ಳುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮಸ್ಥರು ಕೂಡ ಕಾಮಗಾರಿಯ ಬಗ್ಗೆ ನಿಗಾ ವಹಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಮುಖಂಡರಾದ ಚೇತನ ಕಾಂಬಳೆ, ಕ್ಷೇತ್ರ ಶಿಕ್ಷಣಾಧಿಕಾರಿ ಜುಟ್ಟನ್ನವರ್, ಜಿಪಂ ಇಂಜಿನಿಯರ್ ಬನ್ನೂರ್, ಪಿಡ್ಬ್ಲೂಡಿ ಇಲಾಖೆ ಅಧಿಕಾರಿ ಜಾಧವ್, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.
ಎಪಿಎಂಸಿ ಗೆ ಭೇಟಿ:
ನಂತರ ಸತೀಶ ಜಾರಕಿಹೊಳಿ ಅವರು ಬೆಳಗಾವಿಯ ಎಪಿಎಂಸಿ (ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ) ಗೆ ಭೇಟಿ ನೀಡಿದರು. ರೈತರು ಹಾಗೂ ವರ್ತಕರ ಸಮಸ್ಯೆಗಳನ್ನು ಆಲಿಸಿದರು. ಸಮಸ್ಯೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದರು.