ಹಾನಗಲ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇಂದು ಮತಬೇಟೆ ನಡೆಸಿದರು.
ಮತಕ್ಷೇತ್ರದ ತಿಳವಳ್ಳಿ, ಸೋಮಸಾಗರ, ಕೂಸನೂರ ಗ್ರಾಮಗಳಲ್ಲಿ ಸತೀಶ ಅವರು ನೂರಾರು ಕಾರ್ಯಕರ್ತರೊಂದಿಗೆ ಮತಯಾಚನೆ ಮಾಡಿದರು.
ತಿಳವಳ್ಳಿಯಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರು ಯೋಗ್ಯ ಅಭ್ಯರ್ಥಿಯಾಗಿದ್ದು, ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿಯಾಗಿದ್ದಾರೆ. ಹೀಗಾಗಿ, ಮತದಾರರು ಈ ಬಾರಿ ಮಾನೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ್, ಮುಖಂಡ ಆನಂದ ಘಟ್ಟದವರಮಠ ಸೇರಿ ಅನೇಕ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.