Breaking News

ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದು ಬಿಜೆಪಿಯ ಯೋಜನೆಯಾಗಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ


ಹಾನಗಲ್: ಬಡವರನ್ನು ಮತ್ತಷ್ಟು ಬಡವರನ್ನಾಗಿಸುವುದು ಬಿಜೆಪಿಯ ಯೋಜನೆಯಾಗಿದೆ. ಹೀಗಾಗಿಯೇ, ಸರ್ಕಾರ ನಿರಂತರವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಸಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಮತಕ್ಷೇತ್ರದ ಅಕ್ಕಿಆಲೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬಸಾಪುರ ಹಾಗೂ ವೀರಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆದರೂ ಕೂಡ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡುತ್ತಿಲ್ಲ. ಇದರಿಂದ ಬಡವರ ಮೇಲೆ ಕೇಂದ್ರ ಸರ್ಕಾರಕ್ಕೆ ಎಷ್ಟು ಕಾಳಜಿ ಇದೆ ಎಂಬುದು ತಿಳಿಯುತ್ತಿದೆ ಎಂದರು.

1 ರೂ. ಇದ್ದ ಕಡ್ಡಿ ಪೊಟ್ಟಣದ ಬೆಲೆ ಕೂಡ 2 ರೂ.ಗೆ ಏರಿಕೆ ಮಾಡಲಾಗಿದೆ. ಪ್ರತಿಯೊಂದು ವಸ್ತುಗಳ ಬೆಲೆಯನ್ನು ಕೂಡ ಕೇಂದ್ರ ಸರ್ಕಾರ ಹುಡುಕಿ, ಹುಡುಕಿ ಏರಿಕೆ ಮಾಡುತ್ತಿದೆ ಎಂದು ಸತೀಶ ವ್ಯಂಗ್ಯವಾಡಿದರು.

 

ಯೋಜನೆಗಳನ್ನು ನಿಲ್ಲಿಸಿದ ರಾಜ್ಯ ಸರ್ಕಾರ:

ಹಿಂದಿನ ಕಾಂಗ್ರೆಸ್ ಸರ್ಕಾರದ ಅನೇಕ ಯೋಜನೆಗಳನ್ನು ನಿಲ್ಲಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದೆ. ಸಮುದಾಯ ಭವನಗಳು, ಕೃಷಿ ಹೊಂಡ ನಿರ್ಮಾಣ ಸೇರಿ ಯಾವುದೇ ಯೋಜನೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹೊಸ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಆರೋಪಿಸಿದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ಎಕ್ಸ್ ಪರ್ಟ್ ಗಳಾಗಿದ್ದಾರೆ. ಬಿಜೆಪಿಯ ದೆಹಲಿ ನಾಯಕರಿಂದ ಹಿಡಿದು ಗ್ರಾಪಂ ಸದಸ್ಯರ ವರೆಗೆ ಎಲ್ಲರೂ ಸುಳ್ಳಿನ ಸರದಾರರೇ ಆಗಿದ್ದಾರೆ ಎಂದು ಸತೀಶ ವ್ಯಂಗ್ಯವಾಡಿದರು.

ತಕ್ಕ ಪಾಠ ಕಲಿಸಿ:

ಉಪಚುನಾವಣೆ ಕೇವಲ ಹಾನಗಲ್ ಗೆ ಸೀಮಿತವಲ್ಲ. ಇದು ರಾಜ್ಯ ಮತ್ತು ದೇಶದ ಗಮನಸೆಳೆಯುವ ಚುನಾವಣೆಯಾಗಿದೆ. ಇಲ್ಲಿ ಒಂದು ವೋಟು ಕೂಡ ಮುಖ್ಯವಾಗಿದೆ. ಹೀಗಾಗಿ ಕ್ಷೇತ್ರದ ಜನರು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರನ್ನು ಗೆಲ್ಲಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತಕ್ಕ ಪಾಠಕಲಿಸಬೇಕು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಿತ್ತು. ಜನಪರವಾದ ಅನೇಕ ಯೋಜನೆಗಳನ್ನು ಜಾರಿಗೊಳಿಸಿತ್ತು. ಇವುಗಳನ್ನು ಮನಗಂಡು ಜನರು ಕಾಂಗ್ರೆಸ್ ಮತ ನೀಡಬೇಕು ಎಂದರು.

ಕಾಂಗ್ರೆಸ್ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ಪಾಲಯ್ಯಾ, ಮುಖಂಡರಾದ ಸುರೇಶಗೌಡರ್, ಹಬೀಬ್ ಶಿಲೇದಾರ್ ಸೇರಿ ಅನೇಕ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರಚಾರದಲ್ಲಿ ಭಾಗವಹಿಸಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ರೈತರ ಖಾತೆಗಳಿಗೆ ಪರಿಹಾರವನ್ನು ಜಮೆ ಮಾಡಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ : ಕಳೆದ ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ