ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು ಡಿಸಿಎಂಗೆ ಟಾಂಗ್ ನೀಡಿದ್ದಾರೆ.
ಪ್ರತಿಯೊಬ್ಬರು ತಮ್ಮ ನಾಯಕತ್ವದಲ್ಲಿ ಇರಲಿದ್ದಾರೆ. ಆದರೆ ಪಕ್ಷ ಅಂತ ಬಂದಾಗ ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಾರೆ. ಈ ವಿಷಯವಾಗಿ ಮೊದಲು ಹೇಳಿದ್ದೇನೆ. ಈಗಲೂ ಹೇಳುತ್ತಿರುವೆ ಎಂದು ಹೇಳಿದ್ದಾರೆ.
ಇನ್ನೂ ಶಿರಾ, ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಗ್ಗೆ ಪ್ರತಿಕ್ರಿಯಿಸಿ, ಎರಡು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಶಿರಾ ಕ್ಷೇತ್ರದಲ್ಲಿಯೂ ಗೆಲುವು ಅಂತೂ ಖಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
CKNEWSKANNADA / BRASTACHARDARSHAN CK NEWS KANNADA