Breaking News

ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು : ಕಾಂಗ್ರೆಸ್ ಕಾರ್ಯಕರ್ತರಿಂದ ಸತೀಶ್ ಜಾರಕಿಹೊಳಿಗೆ ಸನ್ಮಾನ


ಗೋಕಾಕ : ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಸನ್ಮಾನಿಸಿದರು.

ಹಾನಗಲ್ ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ಗೋಕಾಕನ ಹಿಲ್ ಗಾರ್ಡನ್ ಕಚೇರಿಗೆ ಆಗಮಿಸಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸತ್ಕರಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಹಾನಗಲ್ ಕ್ಷೇತ್ರದಲ್ಲಿ ಬಿಡುಬಿಟ್ಟು ಕೈ ಅಭ್ಯರ್ಥಿ ಪರ ನಿರಂತರ ಪ್ರಚಾರ ನಡೆಸಿದ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ವಿವೇಕ ಜತ್ತಿ, ಶಿವು ಕಿಲಾರಿ, ಪಾಂಡು ಮನ್ನಿಕೇರಿ, ಕಲ್ಪನಾ ಜೋಶಿ, ಮಂಜು ಶಮಶೇರ್, ತನ್ವೀರ ಶಮಶೇರ್ ಸೇರಿದಂತೆ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ