ಗೋಕಾಕ : ಕನಕದಾಸ ಜಯಂತಿಯ ಅಂಗವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ದಾಸ ಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರ 534ನೇ ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲಾಗುತ್ತಿದೆ ಎನ್ನುವ ಮೂಲಕ ನಾಡಿನ ಜನತೆಗೆ ದಾಸ ಶ್ರೇಷ್ಠರಾದ, ಸಂತ ಕನಕದಾಸರ ಜಯಂತಿಯ ಶುಭಾಶಯ ಕೋರಿದರು.
ಕನಕದಾಸರು ಸಮಾಜದ ಮೇಲು, ಕೀಳು, ಜಾತಿ, ಮತ ಸಿದ್ಧಾಂತದ ವಿರುದ್ಧ ಪ್ರತಿಭಟನಾ ನೆಲೆಗಟ್ಟಿನಲ್ಲಿ ಕನಕ ದಾಸ ಸಾಹಿತ್ಯಕ್ಕೆ ವೈಚಾರಿಕ ಪ್ರಭೆ ತಂದರು. ಅವರು ಸಾರಿದ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವರ ನೀಡಿದ ಆದರ್ಶ ನಮಗೆಲ್ಲರಿಗೂ ದಾರಿದೀಪವಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವೇಕ ಜತ್ತಿಪಾಂಡು ಮನ್ನಿಕೇರಿ, ಶಿವು ಕಿಲಾರಿ, ವಿಠ್ಠಲ ಪರಸನವರ, ಪಂಜನಗೌಡ ದ್ಯಾಮನಗೌಡರ, ಮಾರುತಿ ಗುಡಗುದ್ದಿ, ಪಾಂಡು ರಂಗುಶುಬೆ, ಮುರಳಿ ಬಡಿಗೇರ ಇತರರು ಇದ್ದರು.
CKNEWSKANNADA / BRASTACHARDARSHAN CK NEWS KANNADA