ಬೆಳಗಾವಿ : ತಾಲ್ಲೂಕಿನ ಗೊಂಡವಾಡ ಗ್ರಾಮದ ಮಹಾತ್ಮಾ ಗಾಂಧಿ ಹೈಸ್ಕೂಲ್ ಸ್ಟೇಡಿಯಂನಲ್ಲಿ ಆಯೋಜಿಸಿದ ಶ್ರೀ ಸಾಯಿ ಬೈರವನಾಥ್ ಟ್ರೋಪಿ -2021-22 ನೇ ಸಾಲಿನ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾನುವಾರ ಚಾಲನೆ ನೀಡಿದರು.
ಬಳಿಕ ರಾಹುಲ್ ಅವರು ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾದ್ರೆ ಇಂತಹ ಪಂದ್ಯಾವಳಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಂದಾಗ ಮಾತ್ರ ಗ್ರಾಮೀಣ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಲಿದೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಪ್ರತಿಯೊಬ್ಬರು ಪಾಲ್ಗೊಳ್ಳುವುದು ಮುಖ್ಯ. ಕ್ರೀಡೆ ಹಾಗೂ ಶಿಕ್ಷಣಕ್ಕೆ ನಮ್ಮ ತಂದೆಯವರೂ ಸಹ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ. ಅದೇ ಹಾದಿಯಲ್ಲಿಯೇ ನಾವು ಸಾಗುತ್ತಿದ್ದೇವೆ ಎಂದು ತಿಳಿಸಿದರು. ಗೊಂಡವಾಡ ಗ್ರಾಮದ ಹಿರಿಯರು, ಯುವಕರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು.
CKNEWSKANNADA / BRASTACHARDARSHAN CK NEWS KANNADA