ಸಮಸ್ಯೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಬೆಳಗಾವಿ: ಸಾರ್ವಜನಿಕರ ಸಮಸ್ಯೆ ಸರ್ಕಾರದ ಗಮನಕ್ಕೆ ತರಲು ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸುತ್ತೆವೆ ಎಂದು ಹೇಳಿ ಮರೆತಿದ್ದಾರೆ ಎಂದು ಅವರು ಆರೋಪಿಸಿದರು.
ಸರ್ಕಾರ ಶೀಘ್ರ ಎಲ್ಲಾ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿಕೂಡ ಪ್ರತಿಭಟನೆ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ತಮ್ಮ ಹಲವು ಕಾರ್ಯಕರ್ತರೊಂದಿಗೆ ಕಾಕತಿಯಿಂದ ಪ್ರತಿಭಟನೆ ಸ್ಥಳಕ್ಕೆ ಬೈಕ್ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.