ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಮೀತಿ ಇಂದು ಮೊದಲ ಸಭೆ ನಡೆಸಿದೆ. ಸಭೆಯಲ್ಲಿ ಸತೀಶ ಜಾರಕಿಹೊಳಿ ಸೇರಿ ಏಳೆಂಟು ಜನ ಆಕಾಂಕ್ಷಿಗಳು ಇದ್ದಾರೆ. ಇನ್ನು ಒಂದು ವಾರದಲ್ಲಿ ಮತ್ತೊಂದು ಸಭೆ ನಡೆಸಿ, ಬಳಿಕ ಅಭ್ಯರ್ಥಿಯ ಹೆಸರು ತಿಳಿಸಲಾಗುತ್ತದೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಲೋಕಸಭಾ ಚುನಾವಣೆ ನಡೆಯಲಿದೆ. ಪಕ್ಷದ ಎಲ್ಲ ಶಾಸಕರು, ಮಾಜಿ ಶಾಸಕರು , ಮುಖಂಡರು ಸಭೆ ನಡೆಸಲಾಗಿದೆ. ಸಭೆಯಲ್ಲಿ ಏಳೆಂಟು ಜನ ಆಕಾಂಕ್ಷಿಗಳ ಹೆಸರುಗಳು ಕೇಳಿ ಬಂದಿವೆ.
ಇದು ಮೊದಲ ಸಭೆಯಾಗಿದೆ. ಸಭೆಯಲ್ಲಿ ಎಲ್ಲ ನಾಯಕರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಅಭ್ಯರ್ಥಿಯ ಬಗ್ಗೆ ಇನ್ನು ಒಂದು ವಾರದೊಳಗೆ ಮತ್ತೊಂದು ಸಭೆ ನಡೆಸಲಾಗುತ್ತದೆ. ಆಗ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿ, ಹೈಕಮಾಂಡ್ ಸಿಫಾರಸು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ನಮ್ಮ ಪಕ್ಷದ ನಾಯಕರಲ್ಲಿ ಒಗ್ಗಟ್ಟು ಇದೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸಲಿದ್ದೇವೆ. ಈ ಸಭೆಗೆ ಅಗಮಿಸದೆ ಇರುವ ನಾಯಕರು ಎರಡನೇ ಬಾರಿ ನಡೆಯುವ ಸಭೆಗೆ ಬರಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ , ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಸಚಿವ ಎಚ್. ಎಂ.ರೇವಣ್ಣ, ಮಾಜಿ ಶಾಸಕ ಪಿರೋಜ್ ಸೇಠ್, ಅಶೋಕ ಪಟ್ಟಣ, ಅರವಿಂದ ದಳವಾಯಿ, ಜಿ.ಎಸ್.ಪಾಟೀಲ ಇತರರು ಇದ್ದರು.