ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಪೈಪೋಟಿ ನೀಡಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶದಲ್ಲಿಯೂ ಕೂಡ ನಾವು ಮೇಲುಗೈ ಸಾಧಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಚುನಾವಣೆಯಲ್ಲಿಒಟ್ಟಾರೆ 1,185 ವಾರ್ಡ್‍ಗಳಲ್ಲಿ501 ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದರು.
ಜಿಲ್ಲೆಯಲ್ಲಿಕೂಡ ನಿರೀಕ್ಷೆಗೆ ಮೀರಿ ಬಿಜೆಪಿಕ್ಕಿಂತ ಹೆಚ್ಚು ಸ್ಥಾನ ಗೆದ್ದಿದ್ದು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಮಾಡಿದ್ದರಿಂದ ಹೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದ್ದು, 2023ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದ ಅವರು, ಈ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷದ ಪರ ಮತ ಚಲಾಯಿಸಿದ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
CKNEWSKANNADA / BRASTACHARDARSHAN CK NEWS KANNADA