ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಬಡ ವಿದ್ಯಾರ್ಥಿಗಳ ಶಿಕ್ಷಣ, ಕ್ರೀಡೆಗೆ ವಿಶೇಷ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಬಡವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸತೀಶ್ ಜಾರಕಿಹೊಳಿ ಪೌಂಡೇಶನ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ನೀಡುವ ಮಹತ್ವದ ಕಾರ್ಯವನ್ನು ಹಮ್ಮಿಕೊಂಡಿದ್ದಾರೆ.
ದ್ವೀತಿಯ ಪಿಯುಸಿ ತೇರ್ಗಡೆಯಾಗಿ ಸೈನಿಕರಾಗಿ ದೇಶಸೇವೆ ಮತ್ತು ಪೊಲೀಸ್ ಇಲಾಖೆಗೆ ಸೇರಿ ರಾಜ್ಯದಲ್ಲಿ ಸೇವೆ ಸಲ್ಲಿಸಬೇಕು ಎನ್ನುವವರಿಗೆ ಈ ತರಬೇತಿ ನೀಡಲಾಗುತ್ತಿದೆ. ತರಬೇತಿ ಅವಧಿಯಲ್ಲಿ ಲಿಖಿತ ಪರೀಕ್ಷೆಗಳಿಗೆ ತಯಾರಿ ಮತ್ತು ದೈಹಿಕ ಕ್ಷಮತೆ ಸಜ್ಜಾಗಲು ನುರಿತ ವಿಷಯ ತಜ್ಞರಿಂದ ತರಬೇತಿ ನೀಡಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಮೊಬೈಲ್
8217303616, 9663826115 ಸಂಖ್ಯೆಗೆ ಕರೆ ಮಾಡುವ ಮೂಲಕ ಹೆಸರನ್ನು ನೊಂದಾಯಿಸಬಹುದು. ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ 10 ದಿನಗಳ ಸ್ಪರ್ಧಾತ್ಮಕ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ಇದೇ 15 ರಂದು ಹೆಸರನ್ನು ನೊಂದಾಯಿಸಕೊಳ್ಳಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ 2022 ಜನವರಿ 17 ರಿಂದ 10 ದನಗಳ ಕಾಲ ತರಗತಿಗಳನ್ನು ನಡೆಸಲಾಗುವುದು ಎಂದು ಪ್ರಕಟನೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ ತಿಳಿಸಲಾಗಿದೆ.