ಬೆಳಗಾವಿ: ಮತಕ್ಷೇತ್ರದ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಮತಕ್ಷೇತ್ರದ ಕಡೋಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಟ್ಟಡಗಳ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು,ಮಣ್ಣೀಕೆರಿ ಗ್ರಾಮದಲ್ಲಿ ಇನ್ನೂ ಅನೇಕ ಸಮಸ್ಯೆಗಳಿವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು ಎಂದರು.
ಇದೇ ವೇಳೆ ಮಣ್ಣೀಕೆರಿ ಗ್ರಾಮದಲ್ಲಿ 26 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, 50 ಲಕ್ಷ ರೂ. ವೆಚ್ಚದಲ್ಲಿ ಚೆಲುವೆನಟ್ಟಿ ಕ್ರಾಸ್ ದಿಂದ ಮಣ್ಣೀಕೆರಿ ವರೆಗೆ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಕೇದನೂರು ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದ ಕೇದನೂರು ದಿಂದ ಬಂಬರಗಾ ವರೆಗಿನ 3 ಕಿ.ಮೀಟರ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿ, ಇದೇ ಗ್ರಾಮದಲ್ಲಿ ಕನ್ನಡ ಶಾಲೆಯ ನೂತನ ಕಟ್ಟಡ, ಮರಾಠಿ ಶಾಲೆಯ ನೂತನ ಕಟ್ಟಡ, ಕುಡಿಯುವ ನೀರಿನ ಟ್ಯಾಂಕ್ ಉದ್ಘಾಟಿಸಿದರು.
ಕಡೋಲಿ ಗ್ರಾಮದಲ್ಲಿ ಅಂಬೇಡ್ಕರ್ ಭವನ, ಅಂಗನವಾಡಿ ಕಟ್ಟಡ, ವ್ಯಾಯಾಮ ಶಾಲೆ, ಹೈಟೆಕ್ ಗ್ರಂಥಾಲಯ ಉದ್ಘಾಟನೆ ನೆರವೇರಿಸಿ, ಇದೇ ಗ್ರಾಮದಲ್ಲಿ ಫ್ರಭು ನಗರ ರಸ್ತೆ, ಅಂಬೇಡ್ಕರ್ ಭವನದ ಭೂಮಿ ಪೂಜೆ ಮಾಡಿದರು.
ಇದೇ ವೇಳೆ ಕಡೋಲಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು 100 ಕುರ್ಚಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಣ್ಣೀಕೆರಿ ಗ್ರಾಮದ ಮುಖಂಡರು, ಕಡೋಲಿ, ಕೇದನೂರು ಗ್ರಾಮದ ಶಿಕ್ಷಕರು ಇದ್ದರು.