ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ
ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮನವಿ ಮಾಡಿದ ಅವರು, ಹಲವು ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದಾರೆ. ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಗಳು ಇದ್ದಾರೆ. ಕಾರಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರುವ ವ್ಯವಸ್ಥೆ ಮಾಡಬೇಕೆಂದು ಟೀಟ್ನಲ್ಲಿ ತಿಳಿಸಿದ್ದಾರೆ.