ಬೆಳಗಾವಿ: ಭೂತರಾಮನಹಟ್ಟಿ ಗ್ರಾಮದ 35 ಬಣವಿ ಸುಟ್ಟು ಹಾನಿಗೊಳಗಾದ ಕುಟುಂಬಸ್ಥರಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ತಲಾ ಹತ್ತು ಸಾವಿರ ರೂ. ದಂತೆ ಪರಿಹಾರ ನೀಡಿದರು.
ಯಮಕನಮರಡಿ ಮತಕೇತ್ರದ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ ಫೆ.25 ರಂದು 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿತ್ತು. ಸ್ಥಳಕ್ಕೆ ಉಪ ತಹಶೀಲ್ದಾರ್ ಅವರು ಭೇಟಿ ನೀಡಿದ್ದರು.
ಹಾನಿಗೊಳಗಾದ 35 ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಭೂತರಾಮನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ 35 ಕುಟುಂಬಸ್ಥರಿಗೆ ಒಟ್ಟು 3.50.000 ರೂ. ಪರಿಹಾರ ನೀಡಿದರು.
ಈ ಸಂದರ್ಭದಲ್ಲಿ ರಾಮಣ್ಣ ಗುಳ್ಳಿ, ಸುರೇಶ್ ನಾಯಿಕ, ಗ್ರಾಪಂ ಅಧ್ಯಕ್ಷ ಮಾರುತಿ ಚೌಗಲಾ, ಗ್ರಾಪಂ ಉಪಾಧ್ಯಕ್ಷರು, ಸದಸ್ಯರು, ಭಿಮಗೌಡ ಪಾಟೀಲ, ಕಾಂಗ್ರೆಸ್ ಮುಖಂಡರು ಸೇರಿದಂತೆ ಗ್ರಾಮದ ಹಿರಿಯರು, ಗ್ರಾಮಸ್ಥರು ಇದ್ದರು.
CKNEWSKANNADA / BRASTACHARDARSHAN CK NEWS KANNADA