Breaking News

ಮಹಿಳೆಯರ ಸಮಾನತೆಗಾಗಿ ಹೋರಾಡಿದ ಮಹಾನ ಪುರುಷರ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಸತೀಶ ಜಾರಕಿಹೊಳಿ


ಘಟಪ್ರಭಾ: ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ ಬಸವ ಅಂಬೇಡ್ಕರ್ ಮತ್ತು ಸಾವಿತ್ರಿ ಬಾಯಿ ಫುಲೆ ಅವರ ಸಿದ್ಧಾಂತ ಮತ್ತು ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಿ ಎಂದು ಮಹಿಳಾ ಶಿಬಿರಾರ್ಥಿಗಳಿಗೆ ಸತೀಶ ಜಾರಕಿಹೊಳಿ ಅವರು ಕರೆ ನೀಡಿದರು.

ಘಟಪ್ರಭಾದ ಸೇವಾದಳದಲ್ಲಿ ಸತೀಶ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕ ಮತ್ತು ಪೊಲೀಸ್ ಕಾನ್ಸ್ಟೇಬಲ್ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಮಹಿಳಾ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮೂಢನಂಬಿಕೆಗಳ ಸುಳಿವಿನಲ್ಲಿ ಸಿಲುಕಿ ನರಳುತ್ತಿದ್ದ ಮಹಿಳೆಯರ ಹಕ್ಕು ಮತ್ತು ಸಮಾನತೆಗಾಗಿ ಬಸವಣ್ಣನವರು 12 ನೇ ಶತಮಾನದಲ್ಲಿ ಕ್ರಾಂತಿಯನ್ನು ನಡೆಸಿದ್ದರು. ಭಾರತದ ಪ್ರಥಮ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಹೋರಾಟದಿಂದ ಶಿಕ್ಷಣ ವಂಚಿತರಾಗಿದ್ದ ಮಹಿಳೆಯರು ಶಾಲೆಗಳ ಮೆಟ್ಟಿಲೇರಿದ್ದರು. ತದನಂತರ ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳನ್ನು ಸಂವಿಧಾನದದ ಮೂಲಕ ಜಾರಿಗೊಳಿಸಿ ಅವರಿಗೆ ದೇಶದಲ್ಲಿ ಸಮಾನತೆಯ ಹಕ್ಕುಗಳನ್ನು ಕೊಡಿಸಿದರು. ಭಾರತದಲ್ಲಿ ಮೂಢನಂಬಿಕೆಗಳಿಂದಲೇ ಮಹಿಳೆಯರು ಇನ್ನೂ ಸಂಪೂರ್ಣವಾಗಿ ಮುನ್ನೆಲೆಗೆ ಬರುತ್ತಿಲ್ಲ ಎಂದು ಸತೀಶ ಜಾರಕಿಹೊಳಿ ಅವರು ವಿಷಾದ ವ್ಯಕ್ತಪಡಿಸಿದರು.

ಮಹಿಳೆಯರ ಸಮಾನತೆಗಾಗಿ ಹೋರಾಡಿದ ಬುದ್ಧ, ಬಸವ ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ ಅಂತಹ ಮಹಾನ ಪುರುಷರ ಸಿದ್ಧಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಸಿಕೊಂಡು ಸಮಾನತೆಯಿಂದ ಜೀವನ ಸಾಗಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತರಬೇತಿ ಉಸ್ತುವಾರಿ ರವೀಂದ್ರ ನಾಯ್ಕರ, ದೈಹಿಕ ತರಬೇತುದಾರ ರೇಣುಕಾ ವನಕುರಿ, ಮಾಜಿ ದಲಿತ ಸೇನಾ ಅಧ್ಯಕ್ಷ ಶಿವುಕುಮಾರ, ಶಿವು ಪಾಟೀಲ, ಪಾಂಡು ಮನ್ನಿಕೇರಿ, ಆಂಜಿನಪ್ಪ ಲೋಕಿಕೆರೆ, ಉಷಾ ನಾಯಿಕ, ಸೇರಿ ಇತರರು ಇದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ