ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ, ಹೊಸ ಭಾರತದ ನಿರ್ಮಾತೃ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್. ಇಡೀ ಭಾರತಕ್ಕೆ ಸ್ಫೂರ್ತಿ ತುಂಬಿದ, ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದ ನೇತಾರ. ಮಹಿಳಾ ಸಮಾನತೆ, ಪ್ರಗತಿಯ ಕನಸು ಕಂಡ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ವಿವೇಕ್ ಜತ್ತಿ, ವಿಠ್ಠಲ ಪರಸನ್ನವರ , ಪ್ರಹ್ಲಾದ್ ನಾಡಿಗೇರ, ಪಾಂಡು ರಂಗಸುಬೆ, ಪ್ರಕಾಶ್ ಬಸಾಪುರೆ, ಸುರೇಶ್ ಮುಡ್ಡಪ್ಪಗೋಳ ಶಿವು ಕಿಲಾರಿ, ಹಾಗೂ ಹಿಲ್ ಗಾರ್ಡನ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.