Breaking News

ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಿ: ರಾಹುಲ್‌ ಜಾರಕಿಹೊಳಿ


ಮಹಾಲಿಂಗಪೂರ: ಪ್ರತಿಯೊಬ್ಬ ಯುವಕರಿಗೆ ಮಾನಸಿಕ, ದೈಹಿಕ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.

ಬಾಗಲಕೋಟ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಶ್ರೀ ಹೆಮರೆಡ್ಡಿ ಮಲ್ಲಮ್ಮ ಯುತ್‌ ಸ್ಪೋಡ್ಸ್‌ ಕ್ಲಬ್‌ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.

 

ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ ತೊಡಗಿಕೊಂಡು ಉತ್ತಮ ಆಹಾರ ಪದಾರ್ಥಗಳನ್ನು ಸೇವಿಸಿ ನೂರಾರು ವರ್ಷಗಳ ಕಾಲ ಜೀವನ ನಡೆಸುತ್ತಿದ್ದರು. ಆಧುನಿಕತೆ ಹೆಚ್ಚಾದಂತೆ ಮನುಷ್ಯ ಹಲವು ರೀತಿಯ ರೋಗಗಳಿಗೆ ಒಳಪಡುತ್ತಿದ್ದಾನೆ. ಈ ನಿಟ್ಟಿನಲ್ಲಿ ಮನುಷ್ಯ ಆರೋಗ್ಯವಾಗಿ ಜೀವನ ನಡೆಸಲು ಕ್ರೀಡೆಗಳಲ್ಲಿ ಭಾಗವಹಿಸುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

 

ಈ ಸಂರ್ಭದಲ್ಲಿ ಮಾಜಿ ಸಚಿವೆ, ಚಿತ್ರ ನಟಿ ಉಮಾಶ್ರೀ, ಬಾಗಲಕೋಟ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ. ಎ.ಆರ್.‌ ಬೆಳಗಲಿ, ವೈದ್ಯರಾದ ಡಾ. ಅಜೀತ್‌ ಕನಕರಡ್ಡಿ, ಡಾ. ಪದ್ಮಜೀತ್‌ ನಾಡಗೌಡ, ಪುರಸಭೆ ಸದಸ್ಯರಾದ ಯಲ್ಲನಗೌಡ ಪಾಟೀಲ್‌ ಸೇರಿದಂತೆ ಇತರರು ಇದ್ದರು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ