ಪಾಶ್ವಾಪುರ: ಇಂದು ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ಒಂದು ಜನಪ್ರಿಯ ಕ್ರೀಡೆಯಾಗಿದ್ದು , ಎಲ್ಲ ವಿದ್ಯಾರ್ಥಿಗಳು ಸಾಂಘಿಕ ಸ್ಫೂರ್ತಿಯಿಂದ ಭಾಗವಹಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡರಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಕ್ಷೇತ್ರದ ಬಸ್ಸಾಪುರ ಗ್ರಾಮದಲ್ಲಿ ನಡೆದ ರಾಹುಲ್ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಟೆನಿಸ ಬಾಲ್ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಟ್ರೋಫಿ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿ, ಕ್ರೀಡೆಯು ಜೀವನದ ಮುಖ್ಯ ಅಂಶವಾಗಿದ್ದು ಕಾನೂನು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆಯಿಂದ ಇಂಥ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಇಂದಿನ ಯುವಕರು ದುಶ್ಚಟಗಳತ್ತ ಮುಖ ಮಾಡದೇ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ಹೊಂದಿ ಉತ್ತಮ ಆರೋಗ್ಯ ಹೊಂದಲು ಮುಂದಾಗಬೇಕು ಎಂದು ಹೇಳಿದರು.

ಇದೇ ವೇಳೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರಿಗೆ ಕ್ರೀಡಾಳುಗಳು ಹಾಗೂ ಗಣ್ಯರು ಸನ್ಮಾನ ಮಾಡಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ಮಂಜುಗೌಡಾ ಪಾಟೀಲ, ಕಾಂಗ್ರೆಸ್ ಮುಖಂಡ ಕಿರಣ ರಜಪೂತ ಹಾಗೂ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದ ಸದಸ್ಯರು ಇದ್ದರು.
CKNEWSKANNADA / BRASTACHARDARSHAN CK NEWS KANNADA