ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಗ್ರಾಪಂ ಸದಸ್ಯರಾದ ಬಸವಾರಾಜ ನಾಯ್ಕ, ಪಿಂಟು ಅವರ ನೇತೃತ್ವದಲ್ಲಿ ಯಮಕನಮರಡಿ ಮತಕ್ಷೇತ್ರದ ಕಲಖಾಂಬ ಗ್ರಾಮದ ಅನೇಕ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಸೇರ್ಪಡೆಮಾಡಿಕೊಂಡು ಅವರು ಮಾತನಾಡಿದರು.
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಯುವಕರಿಗೆ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಆದರೆ ಈ ಎಲ್ಲ ಸಮಸ್ಯೆಗಳಿಗೆ ಯಾವ ಬಿಜೆಪಿ ನಾಯಕರು ಸ್ಪಂದಿಸುತ್ತಿಲ್ಲ. ಹೀಗಾಗಿ ಸಾರ್ವಜನಿಕರು ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ರಾಜು ಪಾಟೀಲ, ಸಂತೋಷ ನಿರೊಜಿ, ರಮೇಶ ಪಾಟೀಲ, ಅಪ್ಪಾಜಿ ಸಾವಿ, ಮಾರುತು ಬೆಳಗಾಂವಕರ, ಜ್ಯೋತಿಬಾ ಮಾಸೇಕರ ಸೇರಿದಂತೆ ನೂರಾರು ಕಾರ್ಯಕರ್ತರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅರವಿಂದ ಕಾರಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.